×
Ad

ಬೆಂಗಳೂರು | ರಸ್ತೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿದವರ ಮೇಲೆ ಎಫ್‍ಐಆರ್ ದಾಖಲು

Update: 2024-10-07 17:43 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಬಿಎಂಪಿಯ ಆರ್.ಆರ್. ನಗರ ವಲಯದ ಹೇರೋಹಳ್ಳಿ ವಾರ್ಡ್‍ನ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸುತ್ತಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.

ಕೊಳವೆ ಬಾವಿ ಕೊರೆಸಲು ಬಿಬಿಎಂಪಿ ವತಿಯಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ. ಅ.3ರಂದು ಕೊಳವೆ ಬಾವಿ ಕೊರೆಸುವ ಕಾರ್ಯ ನಡೆದಿರುತ್ತದೆ. ಈ ಸಂಬಂಧ ಪಾಲಿಕೆಗೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಈಗಾಗಲೇ ಸ್ಥಳೀಯ ನಿವಾಸಿಗಳಾದ ಜಯರಾಜ್, ಧನಂಜಯ್ಯ ಸೇರಿ ಮತ್ತಿತರರ ಮೇಲೆ ಪ್ರಥಮ ವರ್ತಮಾನ ವರದಿ(ಎಫ್‍ಐಆರ್) ದಾಖಲಿಸಿಕೊಳ್ಳಲಾಗಿದ್ದು, ಕೂಡಲೆ ಶಿಸ್ತು ಕ್ರಮ ಜರುಗಿಸಲು ಪೊಲೀಸ್ ಠಾಣೆಯಲ್ಲಿ ಕೋರಲಾಗಿದೆ. ಅಲ್ಲದೆ ಅನಧಿಕೃತವಾಗಿ ರಸ್ತೆಯಲ್ಲಿ ಕೊಳವೆ ಬಾವಿ ಕೊರೆದವರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News