ಬೆಂಗಳೂರು, ನ.24: ರಾಜ್ಯದ ಕಾಡಿನಂಚಿನ ಗ್ರಾಮಗಳಲ್ಲಿನ ಆನೆ-ಮಾನವ ಸಂಘರ್ಷಕ್ಕೆ ಆನೆಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಪರಿಹಾರವಾಗಬಲ್ಲದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದಲ್ಲಿಂದು 6342 ಗ್ರಾಮ ಗ್ರಂಥಾಲಯಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ತಾವು ಈ ಹಿಂದೆ ಅರಣ್ಯ ಸಚಿವನಾಗಿದ್ದಾಗ ಈ ಯೋಜನೆ ರೂಪಿಸಿದ್ದೆ, ಆದರೆ ಕೇಂದ್ರ ಸರ್ಕಾರ ಹುಲಿ ಸಂರಕ್ಷಿತ ಧಾಮದಲ್ಲಿ ಇದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿತ್ತು ಎಂದರು.

ತೋಟಗಳಲ್ಲೇ ಹುಟ್ಟಿ, ತೋಟದಲ್ಲೇ ಬೆಳೆಯುವ ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಇಂತಹ ಆನೆಗಳನ್ನು ಆನೆಧಾಮದಲ್ಲಿ ಬಿಟ್ಟರೆ ಸಮಸ್ಯೆ ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ರಾಮಲಿಂಗಾರೆಡ್ಡಿ ಹಿರಿಯ ಮತ್ತು ಅನುಭವಿ ಸಚಿವರಾಗಿದ್ದು, ಅವರು ಈಗಾಗಲೇ ಸಬೆ ನಡೆಸುವುದಾಗಿ ತಿಳಿಸಿದ್ದಾರೆ. ಅವರು ಈ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ

contributor