Anekal | ಪ್ರಧಾನಮಂತ್ರಿ ಭೇಟಿ ಹಿನ್ನೆಲೆ: ನವೆಂಬರ್ 12 ಮತ್ತು 13 ರಂದು ಮಾಂಸದ ಅಂಗಡಿಗಳು ಬಂದ್
ನರೇಂದ್ರ ಮೋದಿ | Photo Credit : PTI
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಕಾರದ ವತಿಯಿಂದ ನವೆಂಬರ್ 13 ರಂದು ‘ಪ್ರಶಾಂತಿ ಕುಟೀರ’ದಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಭದ್ರತಾ ಹಿತದೃಷ್ಟಿಯಿಂದ ಮಾಂಸದ ಅಂಗಡಿಗಳನ್ನು ಮುಚ್ಚಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರಧಾನಮಂತ್ರಿಗಳ ಭದ್ರತೆ ಹಾಗೂ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಸೆಕ್ಷನ್ 163(1) ರಡಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ನವೆಂಬರ್ 12 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 13 ರ ಸಂಜೆ 4 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.