ಸಾಂದರ್ಭಿಕ ಚಿತ್ರ | PC : AI

ಬೆಂಗಳೂರು : ಆನೆ ದಂತ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿರುವ ಆನೇಕಲ್ ಪೊಲೀಸರು ಏಳು ಆನೆ ದಂತಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ಮುತ್ಯಾಲಮಡುವು ಸಮೀಪ ಪೊಲೀಸರ ಈ ಕಾರ್ಯಾಚರಣೆ ನಡೆದಿದ್ದು, ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಸತೀಶ್ವರನ್, ಶರತ್ ಕುಮಾರ್ ಮತ್ತು ಶಂಕರ್ ಎಂದು ಗುರುತಿಸಲಾಗಿದೆ.

ಇನ್ಸ್‌ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ವನ್ಯಜೀವಿ ಬೇಟೆ ಮತ್ತು ದಂತ ಹಾಗೂ ಜಿಂಕೆ ಮಾಂಸ ಸಾಗಾಣಿಕೆ ಬಗ್ಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ನಾಗರಾಜ್ ಅಪ್ಪಸಂದ್ರ/ವಾರ್ತಾಭಾರತಿ

ಕ್ರೈಂ ಹಾಗೂ ಹೈಕೋರ್ಟ್ ವರದಿಗಾರರು

ನಾಗರಾಜ್ ಅಪ್ಪಸಂದ್ರ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ಅವರು ‘ವಾರ್ತಾಭಾರತಿ’ ಡಿಜಿಟಲ್ ನಲ್ಲಿ ಕ್ರೈಂ ಹಾಗೂ ಹೈಕೋರ್ಟ್ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.