×
Ad

ನನ್ನ ಬಳಿ ನೂರು ಎಕರೆ ಜಮೀನು ಇಲ್ಲ : ಎಂ.ಬಿ.ಪಾಟೀಲ್‌ ಗೆ ಅನಿತಾ ಕುಮಾರಸ್ವಾಮಿ ತಿರುಗೇಟು

"ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳುಮಟ್ಟಕ್ಕೆ ಯಾರೂ ಹೋಗಬಾರದು"

Update: 2026-06-24 19:01 IST

 ಬೆಂಗಳೂರು : ‘ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿರುವಂತೆ ನನ್ನ ಬಳಿ 100 ಎಕರೆ ಜಮೀನು ಇಲ್ಲ. ನನ್ನ ಹೆಸರಿನಲ್ಲಿರುವುದು 32 ಎಕರೆ ಭೂಮಿ ಮಾತ್ರ’ ಎಂದು ಮಾಜಿ ಶಾಸಕ ಅನಿತಾ ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ರಾಜಕೀಯ ದುರುದೇಶಕ್ಕಾಗಿ ಮನೆಯವರನ್ನು ಎಳೆದು ತಂದು ಸುಳ್ಳು ಪ್ರಚಾರ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.

‘ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳುಮಟ್ಟಕ್ಕೆ ಯಾರೂ ಹೋಗಬಾರದು. ಅನಗತ್ಯವಾಗಿ ನನ್ನ ಬಗ್ಗೆ, ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಕಾನೂನು ಮೂಲಕ ಅಂತಹವರಿಗೆ ಉತ್ತರ ಕೊಡುತ್ತೇನೆ’ ಎಂದು ಅನಿತಾ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತಿಚೇಗೆ ಸಚಿವ ಎಂ.ಬಿ.ಪಾಟೀಲ್, ‘ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿ ನೂರಾರು ಎಕರೆ ಆಸ್ತಿ ಇದೆ’ ಎಂದು ಆರೋಪ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಸಚಿವ ಎಂ.ಬಿ.ಪಾಟೀಲ್‍ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News