ಬೆಂಗಳೂರು: ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ 2022ರಲ್ಲಿ ಬಿಜೆಪಿ ಸರಕಾರ ತಂದಿರುವ ತಿದ್ದುಪಡಿಯನ್ನು ಕಾಂಗ್ರೆಸ್ ಸರಕಾರ ರದ್ದುಗೊಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಅವರು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಲ್ಪಸಂಖ್ಯಾತ, ದಲಿತ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

"ನಾವು ಕೊಟ್ಟ ಮಾತನ್ನು ಈಡೇರಿಸುತ್ತೇವೆ. 2022ರಲ್ಲಿ ಹೇಗಿತ್ತೋ ಅದೇ ತರಕ್ಕೆ ಮತಾಂತರ ಕಾಯ್ದೆಯನ್ನು ಜಾರಿಗೆ ತರಲಾಗುವುದು'' ಎಂದ ಹರಿಪ್ರಸಾದ್, "ಭಾರತವನ್ನು ಪ್ರತಿನಿಧಿಸುವ ಪಕ್ಷ ಕಾಂಗ್ರೆಸ್. ಜಾತಿ ಧರ್ಮದ ಮೇಲೆ ನಾವು ನಿಂತಿಲ್ಲ. ಎಲ್ಲರ ಅನಿಸಿಕೆ ಅಭಿಪ್ರಾಯಗಳನ್ನು ನಾವು ಆಲಿಸುತ್ತೇವೆ'' ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor