×
Ad

ಬ್ಯಾರಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Update: 2026-05-09 23:07 IST

ಬೆಂಗಳೂರು : ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಬೆಂಗಳೂರು ವತಿಯಿಂದ ಪ್ರತಿವರ್ಷ ನಡೆಯುವ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ಬ್ಯಾರಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ರಾಜ್ಯ ಪರೀಕ್ಷೆಯಲ್ಲಿ ಕನಿಷ್ಠ ಶೇ.95 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 10ನೇ ಮತ್ತು 12ನೇ ತರಗತಿಯಲ್ಲಿ ಸಿಬಿಎಸ್ಸಿ, ಐಸಿಎಸ್ಸಿ, ಐಎಸ್‌ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2026ರ ಮೇ 30 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಥವಾ ಇ-ಮೇಲ್, ವಾಟ್ಸ್‌ಆ್ಯಪ್ ಹಾಗೂ ಖುದ್ದಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ವಿಳಾಸ: ದಿ ಬ್ಯಾರಿಸ್ ಆಮಿಟಿ, ಬಿಡಿಎ ಕಾಂಪ್ಲೆಕ್ಸ್ ಎದುರು, 1ನೇ ಹಂತ, ಮೂರನೇ ಬ್ಲಾಕ್, ಎಚ್‌ಬಿಆರ್ ಲೇಔಟ್ ಬೆಂಗಳೂರು 560043 (The Bearys' Amity, Opp. BDA Complex, 1st Stage, 3rd Block, HBR Lay-out, Bengaluru 560043) ಅರ್ಜಿ ಸಲ್ಲಿಸಬಹುದು.

ಇ-ಮೇಲ್: beary.bhavan@gmail.com, ವಾಟ್ಸ್‌ಆ್ಯಪ್ ಸಂಖ್ಯೆ-72599 66404ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News