×
Ad

ʼನಮ್ಮ ರಾಷ್ಟ್ರ ಮತ್ತು ನಮ್ಮ ಚರ್ಚ್‌ಗಾಗಿ ಪ್ರಾರ್ಥಿಸಿʼ : ಕ್ರೈಸ್ತ ಸಮುದಾಯಕ್ಕೆ ಬೆಂಗಳೂರಿನ ಆರ್ಚ್ ಬಿಷಪ್ ಕರೆ

Update: 2025-05-10 17:17 IST

ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ

ಬೆಂಗಳೂರು: ಮೇ.11ರ ಪ್ರಾರ್ಥನೆಯಲ್ಲಿ ನಮ್ಮ ರಾಷ್ಟ್ರ ಮತ್ತು ನಮ್ಮ ಚರ್ಚ್‌ಗಾಗಿ ಪ್ರಾರ್ಥಿಸಿ ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರು ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟನೆಯನ್ನು ಹೊರಡಿಸಿರುವ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರು, ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್ ಅವರನ್ನು ನೂತನ ಪೋಪ್ ಆಗಿ ಆಯ್ಕೆ ಮಾಡಿರುವುದಕ್ಕೆ ಹರ್ಷವನ್ನು ವ್ಯಕ್ತಪಡಿಸಿದರು. ಪೋಪ್ ಆಯ್ಕೆ ಚರ್ಚ್‌ಗೆ ಸಂತೋಷದ ಕ್ಷಣವಾಗಿದೆ. ಹೊಸ ಪೋಪ್ ಆಯ್ಕೆ ಮಾಡುವಲ್ಲಿ ಕಾರ್ಡಿನಲ್ಸ್ ಗಳಿಗೆ ಮಾರ್ಗದರ್ಶನ ನೀಡಿದ್ದಕ್ಕಾಗಿ ದೇವರಿಗೆ ನಾವು ಕೃತಜ್ಞತೆ ಸಲ್ಲಿಸೋಣ ಎಂದು ಹೇಳಿದರು.

ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ಮತ್ತು ಹೇಡಿತನದ ಭಯೋತ್ಪಾದಕ ದಾಳಿಯು ದೇಶವನ್ನೇ ಬೆಚ್ಚಿಬೀಳಿಸಿದೆ. ಮುಗ್ಧ ಪ್ರವಾಸಿಗರ ಮೇಲಿನ ದಾಳಿಯು ತೀವ್ರ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರಿಗೆ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ.

ದೇಶದ ಗಡಿಗಳನ್ನು ಸಂರಕ್ಷಿಸಲು ಮತ್ತು ನಮ್ಮ ಜನರನ್ನು ಸುರಕ್ಷಿತವಾಗಿರಿಸಲು ಪ್ರಧಾನ ಮಂತ್ರಿಗಳ ನೇತೃತ್ವದಲ್ಲಿ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿದ ಭಾರತದ ಸೈನಿಕರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

ಪೋಪ್ ಆಯ್ಕೆ ಮತ್ತು ರಾಷ್ಟ್ರೀಯ ಸಂದಿಗ್ಧ ಪರಿಸ್ಥಿತಿ ಹಿನ್ನಲೆ ಕ್ರೈಸ್ತ ಸಮುದಾಯ ರವಿವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ನಮ್ಮ ರಾಷ್ಟ್ರ ಮತ್ತು ನಮ್ಮ ಚರ್ಚ್‌ಗಾಗಿ ಪ್ರಾರ್ಥಿಸಿ ಎಂದು ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ  ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News