×
Ad

ಬೆಂಗಳೂರು | 7 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Update: 2024-10-28 19:16 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಬಾಂಗ್ಲಾದೇಶದಿಂದ ಬಂದು ಏಳು ವರ್ಷಗಳಿಂದ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪಿಯನ್ನು ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ವಿದೇಶಿ ಪ್ರಜೆಗಳ ಪ್ರಾದೇಶಿಕ ನೋಂದಣಿ ಕೇಂದ್ರ ಹಾಗೂ ರಾಜ್ಯ ಆಂತರಿಕ ಭದ್ರತಾ ದಳದ ಅಧಿಕಾರಿಗಳ ಮಾಹಿತಿ ಆಧರಿಸಿ, ಕಾಡುಗೋಡಿ ಠಾಣೆ ಪೊಲೀಸರು ಬಾಂಗ್ಲಾದೇಶ ಮೂಲದ ರಝಾನ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಾಂಗ್ಲಾದೇಶದಲ್ಲಿ ತನ್ನ ಪತ್ನಿಯನ್ನು ತೊರೆದಿದ್ದ ಆರೋಪಿ, ವೈದ್ಯಕೀಯ ವೀಸಾ ಪಡೆದು ಭಾರತಕ್ಕೆ ಬಂದಿದ್ದ. ಬಳಿಕ ಭಾರತದಲ್ಲಿ ಇನ್ನೊಂದು ವಿವಾಹವಾಗಿ ಬೆಂಗಳೂರಿನಲ್ಲಿ ಕಸ ವಿಲೇವಾರಿ ಕೆಲಸ ಮಾಡಿಕೊಂಡು ವಾಸವಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News