×
Ad

ಬೆಂಗಳೂರು | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಆರೋಪ : ದೀಪರಾಜ್ ಚಂದ್ರ ಬಂಧನ

Update: 2025-03-20 20:42 IST

ಸಾಂದರ್ಭಿಕ ಚಿತ್ರ | PC : freepik.com

ಬೆಂಗಳೂರು : ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ನಗರದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೌಕರ ದೀಪರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ದೀಪರಾಜ್ ಚಂದ್ರ, ನಗರದ ಬಿಇಎಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿನ ಮತ್ತಿಕೆರೆಯಲ್ಲಿ ವಾಸವಾಗಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ.

ತಾನು ಕೆಲಸ ಮಾಡುತ್ತಿದ್ದ ಯೋಜನೆ ಬಗ್ಗೆ ಕಳೆದ ಮೂರು ವರ್ಷಗಳಿಂದ ರಹಸ್ಯವಾಗಿ ಮಾಹಿತಿ ನೀಡುತ್ತಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆಸಿದ ಸೇನಾ ಗುಪ್ತಚರ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆಗಳು ದೀಪರಾಜ್‍ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಬಂಧಿತ ದೀಪರಾಜ್ ಚಂದ್ರ, ಆನ್‍ಲೈನ್ ಕರೆಗಳ ಮೂಲಕ ಪಾಕ್ ಏಜೆಂಟ್‍ಗಳೊಂದಿಗೆ ಸಂಪರ್ಕಿಸಿ ವಿವಿಧ ಆ್ಯಪ್‍ಗಳ ಮೂಲಕ ಮಾಹಿತಿ ನೀಡಿರುವುದು ಗೊತ್ತಾಗಿದೆ. ಆರೋಪಿ ಬಳಿಯಿದ್ದ ಲ್ಯಾಪ್ ಟಾಪ್, ಮೊಬೈಲ್ ವಶಕ್ಕೆ ಪಡೆದು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News