ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಪಿಜಿ ಮಾಲಕನ ಬಂಧನ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ನಗರದ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಪಿಜಿ(ಪೇಯಿಂಗ್ ಗೆಸ್ಟ್) ಮಾಲಕ ಅತ್ಯಾಚಾರ ಎಸಗಿರುವ ಆರೋಪದಡಿ ಕೇರಳ ಮೂಲದ ವ್ಯಕ್ತಿಯನ್ನು ಸೋಲದೇವನಹಳ್ಳಿ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ವಿದ್ಯಾರ್ಥಿನಿಯ ದೂರಿನನ್ವಯ ಪೊಲೀಸರು ಪಿಜಿ ಮಾಲಕ ಅಶ್ರಫ್(37) ಎಂಬಾತನನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.
ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಅಶ್ರಫ್ ಪಿಜಿ ನಡೆಸುತ್ತಿದ್ದಾನೆ. ಅದಕ್ಕೆ ಸುಮಾರು ಒಂದು ವಾರದ ಹಿಂದೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಸೇರಿಕೊಂಡಿದ್ದಾರೆ. ಆ.1ರ ಶನಿವಾರ ರಾತ್ರಿ ಆರೋಪಿ ಅಶ್ರಫ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ದೂರು ನೀಡದಂತೆ ಬೆದರಿಕೆ ಹಾಕಿದ್ದ ಎಂದು ಸಂತಸ್ತೆ ದೂರಿನಲ್ಲಿ ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಮುಂದಿನ ಕ್ರಮ ಕೈಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.