ಬೆಂಗಳೂರು : ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಫ್ರೀಡಂಪಾರ್ಕ್‍ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ.

ಶುಕ್ರವಾರ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಐಎನ್‍ಟಿಯುಸಿ ಮುಖಂಡ  ಶಾಮಣ್ಣ ರೆಡ್ಡಿ, ಕಟ್ಟಡ ಕಾರ್ಮಿಕರು ಆಶಾ ಕಾರ್ಯಕರ್ತೆಯರ ಹೋರಾಟದಿಂದ ಸ್ಫೂರ್ತಿ ಪಡೆಯುತ್ತಿದ್ದಾರೆ. ಸರಕಾರದ ಒಂದು ಭಾಗವಾಗಿರುವ ಐಎನ್‍ಟಿಯುಸಿ ಪರವಾಗಿ ಪ್ರತ್ಯಕ್ಷ, ಪರೋಕ್ಷವಾಗಿ ಬೆಂಬಲ ಸೂಚಿಸುತ್ತೇವೆ. ಸಿದ್ದರಾಮಯ್ಯ ನೀಡಿದ ಭರವಸೆಯಂತೆ ಕಾಂಗ್ರೆಸ್ ಸರಕಾರ ನಡೆದುಕೊಳ್ಳಬೇಕು. ಆಶಾ ಕಾರ್ಯಕರ್ತೆಯರಿಗೆ ವೇತನ ನೀಡಬೇಕು, ಹೋರಾಟ ಗೆಲ್ಲುವವರೆಗೂ ನಿಮ್ಮೊಂದಿಗಿರುತ್ತೇವೆ ಎಂದು ತಿಳಿಸಿದರು.

ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಮಾತನಾಡಿ, ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತೇವೆ. ಅಲ್ಲಿಯವರೆಗೆ ಮಾನವೀಯ ನೆಲೆಯಲ್ಲಿ ಮಾಸಿಕ 15 ಸಾವಿರ ರೂ. ಗೌರವಧನ ನೀಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಧರಣಿಯಲ್ಲಿ ರೈತ ಮುಖಂಡ ಜೆ.ಎಂ.ವೀರಸಂಗಯ್ಯ, ಎಐಟಿಯುಸಿ ಮುಖಂಡರಾದ ಜಯಮ್ಮ, ಅಮ್ಜದ್, ಸಂಘದ ಪದಾಧಿಕಾರಿಗಳಾದ ನಾಗಲಕ್ಷ್ಮಿ, ಸೋಮಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮನೋಜ್ ಆಜಾದ್/ವಾರ್ತಾಭಾರತಿ

ಬೆಂಗಳೂರು ವರದಿಗಾರರು