×
Ad

ಅಭಿವೃದ್ಧಿಯ ಸಮತೋಲನ ಬಜೆಟ್: ಡಾ.ಪರಮೇಶ್ವರ್

Update: 2025-03-07 23:03 IST

ಡಾ.ಜಿ.ಪರಮೇಶ್ವರ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ವರ್ಗದ ಜನರ ಸರ್ವತೋಮುಖ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಸಮತೋಲನವಾದ ಬಜೆಟ್ ನೀಡಿದ್ದು, ಅವರನ್ನು ಅಭಿನಂದಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಬಜೆಟ್ ಮಂಡನೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಈ ಬಜೆಟ್ 4.09 ಲಕ್ಷ ಕೋಟಿ ರೂ.ಗಳಿಗೆ ತಲುಪಿದ್ದು, ಅದು ಸಾಮಾನ್ಯ ಎಂದು ನಾನು ಅಂದುಕೊಳ್ಳುವುದಿಲ್ಲ. ಎಲ್ಲರಿಗೂ ಬಜೆಟ್‍ನಲ್ಲಿ ಒತ್ತು ನೀಡಲಾಗಿದೆ. ಮೂಲಭೂತ ಸೌಲಭ್ಯ, ನೀರಾವರಿ, ಸಮಾಜ ಕಲ್ಯಾಣ, ಗ್ಯಾರಂಟಿ ಯೋಜನೆಗಳಿಗೆ ಸೇರಿದಂತೆ ಎಲ್ಲ ಇಲಾಖೆಗಳಿಗೂ ನ್ಯಾಯ ಒದಗಿಸಿದ್ದಾರೆ ಎಂದರು.

ಇಲಾಖೆಯ ಬಲವರ್ಧನೆಗೆ ಒತ್ತು: ನಂದಿ ಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೆÇಲೀಸ್ ಪಡೆಗಳನ್ನು (ಐಆರ್‍ಬಿ) ಸ್ಥಾಪಿಸಲು 80ಕೋಟಿ ರೂ.ಅನುದಾನ ಕಲ್ಪಿಸಲಾಗಿದೆ. ಬೆಂಗಳೂರು ನಗರದ ಪರಿಣಾಮಕಾರಿ ಪೆÇಲೀಸ್ ವ್ಯವಸ್ಥೆಗಾಗಿ ಈಗಿರುವ 8 ಪೆÇಲೀಸ್ ವಿಭಾಗಗಳನ್ನು 11ಕ್ಕೆ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಿರುವುದು ಸ್ವಾಗತಾರ್ಹ ಎಂದು ಹೇಳಿದರು.

ರಾಜ್ಯದಲ್ಲಿ ಮುಸ್ಲಿಮ್ ಸಮುದಾಯದವರು ಶೇ.18ರಷ್ಟಿದ್ದಾರೆ. ಅವರನ್ನು ಹೊರತುಪಡಿಸಿ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಅವರನ್ನು ಅಭಿವೃದ್ಧಿಯ ಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗುತ್ತದೆ. ಈ ನಿಟ್ಟಿನಲ್ಲಿಯೇ ಕೆಲವು ಕಾರ್ಯಕ್ರಮಗಳನ್ನು ನೀಡಲಾಗಿದೆ. ಹಾಗೆಂದ ಮಾತ್ರಕ್ಕೆ ಓಲೈಕೆ ಮಾಡಿದ್ದಾರೆ ಎಂಬುದು ತಪ್ಪು. ಎಲ್ಲ ವರ್ಗದ ಜನರ ಏಳಿಗೆಗಾಗಿ ಆದ್ಯತೆ ನೀಡಿದ್ದಾರೆ’

-ಡಾ.ಜಿ.ಪರಮೇಶ್ವರ್ ಗೃಹ ಸಚಿವ



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News