×
Ad

ಬೆಂಗಳೂರು | ನೀರಿನ ಸಂಪ್‍ಗೆ ಬಿದ್ದು ಬಾಲಕ ಮೃತ್ಯು

Update: 2024-05-21 21:07 IST

ಬೆಂಗಳೂರು : ಆಟವಾಡುವಾಗ ನೀರಿನ ಸಂಪ್‍ನಲ್ಲಿ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದಲ್ಲಿ ವರದಿಯಾಗಿದೆ.

ಸುಬೀನ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಸುಬೀನ್ ಪೋಷಕರು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದರು. ಸೋಮವಾರ ಮಗನನ್ನು ಮನೆಯಲ್ಲಿ ಬಿಟ್ಟು ದಂಪತಿ ಕೆಲಸಕ್ಕೆ ಹೋಗಿದ್ದರು. ಕೆಲಸದಿಂದ ಬಂದ ಬಳಿಕ ನೋಡಿದರೆ ಮಗು ಕಾಣದೆ ಇದ್ದಾಗ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕ ಸಂಪಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.

ಕೂಡಲೇ ಪೋಷಕರು ಬಾಲಕನನ್ನು ನಗರದ ಕೆ.ಆರ್.ಪುರಂ ಸರಕಾರಿ ಆಸ್ಪತ್ರೆ ದಾಖಲಿಸಲು ಯತ್ನಿಸಿದರೂ, ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಸಂಬಂಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News