×
Ad

ಬೆಂಗಳೂರು | ದ್ವಿಚಕ್ರ ವಾಹನಕ್ಕೆ ವಾಟರ್ ಟ್ಯಾಂಕರ್ ಢಿಕ್ಕಿ : ಅಕ್ಕ-ತಮ್ಮ ಮೃತ್ಯು

Update: 2024-06-07 20:29 IST

ಬೆಂಗಳೂರು: ವೇಗವಾಗಿ ಬಂದ ವಾಟರ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಗಾಯಗೊಂಡು ಮೃತಪಟ್ಟಿರುವ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ವರದಿಯಾಗಿದೆ.

ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿಗಳಾದ ಮಧುಮಿತ(20), ರಂಜನ್(18) ಮೃತರು ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಎಸ್‍ಎಸ್‍ಎಂಆರ್ ವಿ ಕಾಲೇಜಿನಲ್ಲಿ ಮಧುಮಿತ ವ್ಯಾಸಂಗ ಮಾಡುತ್ತಿದ್ದಳು. ಮೊದಲ ದಿನ ಅಕ್ಕನನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮನಾದ ರಂಜನ್ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಎನ್ನಲಾಗಿದೆ.

ಅದೇ ಸಮಯದಲ್ಲಿ ವೇಗವಾಗಿ ಬಂದ ವಾಟರ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ತಕ್ಷಣ ಇಬ್ಬರೂ ಬಿದ್ದಿದ್ದಾರೆ. ಈ ವೇಳೆ ಅವರ ತಲೆ ಮೇಲೆ ಟ್ಯಾಂಕರ್ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ರಮ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News