×
Ad

ಬೆಂಗಳೂರು | ನೀರಿನ ಟ್ಯಾಂಕರ್ ಹರಿದು ಯುವಕ ಮೃತ್ಯು

Update: 2024-07-02 19:23 IST

ಬೆಂಗಳೂರು : ನೀರಿನ ಟ್ಯಾಂಕರ್ ಹರಿದು ಯುವಕ ಮೃತಪಟ್ಟಿರುವ ಘಟನೆ ನಗರದ ಕೊತ್ತನೂರು ದಿಣ್ಣೆಯ ಆರ್‌ಬಿಐ ಲೇಔಟ್‍ನಲ್ಲಿ ಮಂಗಳವಾರ ವರದಿಯಾಗಿದೆ.

ಮೃತನನ್ನು ಕಿರಣ್ ಕುಮಾರ್(21) ಎಂದು ಗುರುತಿಸಲಾಗಿದೆ. ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್, ಜು.2ರ ಮಂಗಳವಾರ ಬೆಳಗ್ಗೆ 9.30 ಸುಮಾರಿಗೆ ಕೆಲಸಕ್ಕೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಟರ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ. ಈ ವೇಳೆ ನೆಲಕ್ಕೆ ಬಿದ್ದ ಕಿರಣ್ ಕುಮಾರ್ ತಲೆ ಮೇಲೆ ಟ್ಯಾಂಕರ್ ಹರಿದ ಪರಿಣಾಮ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News