×
Ad

ಬೆಂಗಳೂರು | ಸ್ಪಾ ಮಾಲಕನಿಗೆ ಬೆದರಿಸಿ ಸುಲಿಗೆಗೆ ಯತ್ನಿಸಿದ ಪ್ರಕರಣ : ಸುದ್ದಿವಾಹಿನಿಯ ಮಾಜಿ ನಿರೂಪಕಿ ಬಂಧನ

Update: 2024-07-11 19:32 IST

ದಿವ್ಯಾ ವಸಂತಾ

ಬೆಂಗಳೂರು : ಸ್ಪಾ ಮಾಲಕನಿಗೆ ಬೆದರಿಕೆ ಹಾಕಿ ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿಯೊಂದರ ಮಾಜಿ ನಿರೂಪಕಿ ದಿವ್ಯಾ ವಸಂತಾ ಎಂಬಾಕೆಯನ್ನು ಇಲ್ಲಿನ ಜೀವನ್ ಭೀಮಾನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಇಂದಿರಾನಗರದ ಟ್ರೀ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮಾಲಕರಿಗೆ 15 ಲಕ್ಷ ರೂ. ಸುಲಿಗೆಗೆ ಯತ್ನಿಸಿದ ಬಗ್ಗೆ ಮಾಲಕ ನೀಡಿದ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಪ್ರಕರಣದ ಆರೋಪಿ ದಿವ್ಯಾ ವಸಂತಾರನ್ನು ಕೇರಳದಲ್ಲಿ ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿ ವಾಹಿನಿಯ ಮಾಜಿ ನಿರೂಪಕಿ ದಿವ್ಯಾ ವಸಂತಾ ಹಾಗೂ ವೆಂಕಟೇಶ್ ಸೇರಿ ಸಹಚರರು ಸೇರಿಕೊಂಡು ಟ್ರೀ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮಾಲಕರಿಗೆ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತದೆಂಬ ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಸಿ ಸುಲಿಗೆಗೆ ಯತ್ನಿಸಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಜೀವನ್ ಭೀಮಾನಗರ ಠಾಣಾ ಪೊಲೀಸರು ವಾರದ ಹಿಂದೆಯೇ ವೆಂಕಟೇಶ್ ಸೇರಿ ಮೂವರನ್ನು ಬಂಧಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News