×
Ad

ಬೆಂಗಳೂರು | ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕಳವು ಆರೋಪ : ಮಹಿಳೆ ಸೆರೆ

Update: 2024-08-09 18:56 IST

ಬೆಂಗಳೂರು : ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕಳವು ಆರೋಪ ಸಂಬಂಧ ಮಹಿಳೆಯೊಬ್ಬರನ್ನು ಇಲ್ಲಿನ ಎಚ್‍ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹೊಸಪೇಟೆ ಮೂಲದ ರೇಣುಕಾ (38) ಎಂಬಾಕೆಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ರೇಣುಕಾ ಮಾರತ್‍ಹಳ್ಳಿ ಪೂರ್ವ ಪೌಂಟೇನ್ ಅಪಾರ್ಟ್‍ಮೆಂಟ್‍ನ ಎರಡು ಪ್ಲಾಟ್‍ಗಳಲ್ಲಿ ಕೆಲಸ ಮಾಡುತ್ತಿದ್ದು, ಈ ವೇಳೆ ಸುಮಾರು 100 ಗ್ರಾಂ ಚಿನ್ನಾಭರಣ ಕದ್ದಿದ್ದಳು ಎನ್ನುವ ದೂರಿನ್ವಯ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News