×
Ad

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿತ ; ಇಬ್ಬರು ಮೃತ್ಯು

Update: 2024-08-10 20:51 IST

ಬೆಂಗಳೂರು : ಇಲ್ಲಿನ ಪೀಣ್ಯಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಜರುಗಿದೆ.

ಪೀಣ್ಯದ ಎನ್‍ಟಿಎಸ್ ಸರ್ಕಲ್‍ನಲ್ಲಿ ಘಟನೆ ನಡೆದಿದ್ದು, ಕಲಬುರಗಿ ಮೂಲದವರು ವೀರೇಶ್ ಹಾಗೂ ಯಾದಗಿರಿ ಮೂಲದ ಹಿಮಾಂಶು ಮೃತರು ಎಂದು ತಿಳಿದು ಬಂದಿದೆ. ಇನ್ನೂ, ಹಲವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತದಿಂದಾಗಿ ಈ ಘಟನೆ ನಡೆದಿದೆ ಎನ್ನುವ ಮಾಹಿತಿ ಮೇಲ್ನೋಟಕ್ಕೆ ಗೊತ್ತಾಗಿದೆ. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಮೇಲ್ಭಾಗದಲ್ಲಿದ್ದ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಉತ್ತರ ವಿಭಾಗ ಡಿಸಿಪಿ ಸೈದುಲ್‌ ಅಡಾವತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯೋಮಾ ಎಲೈಟ್ಸ್ ಎಂಬ ಖಾಸಗಿ ಕಂಪೆನಿಯ ಕಟ್ಟಡ ಇದಾಗಿದ್ದು ಐದಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಮಾಲಕರು ಯಾರು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ. ದೂರು ಪಡೆದು ತನಿಖೆಯನ್ನು ನಡೆಸುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News