×
Ad

ಬೆಂಗಳೂರು | ಬಿಎಂಟಿಸಿ ಬಸ್‌ನಿಂದ ಸರಣಿ ಅಪಘಾತ ; ಬೈಕ್​-ಕಾರು ಜಖಂ

Update: 2024-08-13 21:09 IST

ಬೆಂಗಳೂರು: ಅಜಾಗರೂಕತೆಯಿಂದ ಬಂದ ಬಿಎಂಟಿಸಿ ಬಸ್‍ವೊಂದು ವಾಹನಗಳಿಗೆ ಸರಣಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾನೆ.

ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಎಚ್‍ಎಸ್‍ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು. ಅದೇ ಸಮಯದಲ್ಲಿ ಯಲಹಂಕ ಕಡೆಯಿಂದ ಆರ್‍ಟಿ ನಗರದ ಕಡೆಗೆ ಆಕಾಶ್ ಪಾಟೀಲ್ (27) ಬೈಕ್‍ನಲ್ಲಿ ಹೋಗುತ್ತಿದ್ದಾಗ ಎಸ್‍ಟಿ ಮಾಲ್ ಬಳಿ ಈ ಬಸ್ ಢಿಕ್ಕಿ ಹೊಡೆದು ನಂತರ ಮುಂದೆ ಚಲಿಸುತ್ತಿದ್ದ ಮೂರು ಕಾರುಗಳಿಗೆ ಅಪ್ಪಳಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡ ಆಕಾಶ್ ನನ್ನು ತಕ್ಷಣ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಬಗ್ಗೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News