×
Ad

ಬೆಂಗಳೂರು | ಆಟೋ ರಿಕ್ಷಾದ ಮೇಲೆ ಬಿದ್ದು ಚಾಲಕ ಮೃತ್ಯು

Update: 2024-08-17 20:04 IST

ಬೆಂಗಳೂರು : ಭಾರೀ ಮಳೆಯಿಂದಾಗಿ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಶಿವರುದ್ರಯ್ಯ(49) ಮತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‍ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪಾಲಿಕೆ ನಿಯಮಾವಳಿಗಳ ಪ್ರಕಾರ ಸಂತ್ರಸ್ತ ಕುಟುಂಬ ಸದಸ್ಯರಿಗೆ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News