×
Ad

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ, ಕರೆಯಂತಾದ ರಸ್ತೆಗಳು

Update: 2026-05-18 23:47 IST

ಬೆಂಗಳೂರು : ಸೋಮವಾರ ಸಂಜೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡಿದರು. ಮಳೆಯಿಂದಾಗಿ ಚರಂಡಿಯಲ್ಲಿ ನೀರು ಸರಾಗವಾಗಿ ಹೋಗದೆ ನಗರದ ಹಲವು ರಸ್ತೆಗಳು ಮಳೆನೀರಿನಿಂದ ಆವೃತವಾಗಿ, ಕೆರೆಯಂತಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಅನ್ನು ಬಂದ್ ಮಾಡಲಾಗಿತ್ತು.

ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಚಾಮರಾಜಪೇಟೆ, ಮಲ್ಲೇಶ್ವರಂ, ಶೇಷಾದ್ರಿಪುರಂ, ಹೆಬ್ಬಾಳ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ರಾಜಾಜಿನಗರ, ವಿಧಾನಸೌಧ, ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯನಗರ, ಜೆ.ಪಿ. ನಗರ, ಬನಶಂಕರಿ, ಯಲಹಂಕ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ಇಂದಿರಾನಗರ, ಲಗ್ಗೆರೆ, ನಂದಿನಿ ಲೇಔಟ್, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ ಸೇರಿದಂತೆ ಹಲವೆಡೆ ಗಾಳಿ ಸಮೇತ ಮಳೆಯಾಗಿದೆ.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದ ಸಮಸ್ಯೆಗೆ ಸಿಲುಕಿದ್ದು, ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಳಲ್ಲಿ, ಅಂಗಡಿ ಮುಂಗಟ್ಟುಗಳ ಎದುರು ಸವಾರರು ನಿಂತ ದೃಶ್ಯಗಳು ಕಂಡುಬಂದಿತ್ತು. ಅಲ್ಲದೆ ವಾಹನ ದಟ್ಟನೆ ಕಂಡು ಬಂದಿತ್ತು.

ನಗರದ ಟೌನ್ ಹಾಲ್ ಮುಂಭಾಗದ ರಸ್ತೆ, ಅವೆನ್ಯೂ ರಸ್ತೆ, ಜೆ.ಚಿ ರಸ್ತೆ ಸೇರದಂತೆ ನಗರದ ಬಹುತೇಕ ಪ್ರಮುಖ ರಸ್ತೆಗಳ ಕೆರೆಯಂತಾಗಿದ್ದವು. ಫ್ರೀಡಂಪಾರ್ಕ್ ಬಳಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ಸಂಚಾರ ಕಷ್ಟವಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು. ಮಳೆಯಿಂದ ವಿಧಾನಸೌಧದ ಪಕ್ಕದ ಪ್ಯಾಲೇಸ್ ರಸ್ತೆ ಕೆರೆಯಂತಾಗಿತ್ತು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News