×
Ad

ಬೆಂಗಳೂರು | 2.50 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಟ್ಯಾಟೂ ಆರ್ಟಿಸ್ಟ್ ಬಂಧನ

Update: 2024-12-31 18:49 IST

ಬೆಂಗಳೂರು : ಹೊಸ ವರ್ಷಾಚರಣೆ ಸಮಯದಲ್ಲಿ ಸರಬರಾಜು ಮಾಡಲು ಮಾದಕ ಪದಾರ್ಥಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪದಡಿ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆತನಿಂದ 2.50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆ ಮೂಲದ ರಕ್ಷಿತ್ ಆರ್.ಎಂ(30) ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

ಇಲ್ಲಿನ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ಚೊಕ್ಕನಹಳ್ಳಿಯ ಅಪಾರ್ಟ್‍ಮೆಂಟ್‍ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ 2.50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈತ ಟ್ಯಾಟೂ ರಚನೆಕಾರ ಆಗಿಯೂ ಕೆಲಸ ಮಾಡಿಕೊಂಡಿದ್ದ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಆರೋಪಿಯು ಗೋವಾದಿಂದ ಎಲ್‍ಎಸ್‍ಡಿ, ಥೈಲ್ಯಾಂಡ್‍ನಿಂದ ಹೈಡ್ರೋ ಗಾಂಜಾ, ಹಿಮಾಚಲ ಪ್ರದೇಶದಿಂದ ಚರಸ್ ಹಾಗೂ ಆಂಧ್ರಪ್ರದೇಶದಿಂದ ಗಾಂಜಾ ತರಿಸಿಕೊಂಡು ಸಂಗ್ರಹಿಸಿಟ್ಟುಕೊಂಡಿದ್ದ. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತನ ವಶದಲ್ಲಿದ್ದ 3.55 ಕೆಜಿ ಹೈಡ್ರೋ ಗಾಂಜಾ, 16.65 ಕೆಜಿ ಗಾಂಜಾ, 40 ಎಲ್‍ಎಸ್‍ಸ್‍ಡಿ ಸ್ಟ್ರಿಪ್ಸ್ಸ್, 130 ಗ್ರಾಂ ಚರಸ್, 2.3 ಗ್ರಾಂ ಎಂಡಿಎಂಎ ಕ್ರಿಸ್ಟಲ್, 1.30 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ ಎಂದೂ ಆಯುಕ್ತರು ವಿವರಿಸಿದರು.

ಅದೇ ರೀತಿ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು 11 ಜನ ಆರೋಪಿಗಳನ್ನು ಬಂಧಿಸಿದ್ದು ಒಟ್ಟು 13 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿ 12.70 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿರುವುದಾಗಿ ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News