×
Ad

ಬೆಂಗಳೂರು | ಆರೋಪಿ ಬಿಡುಗಡೆಗೆ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ; ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ!

Update: 2024-03-14 21:13 IST

ಬೆಂಗಳೂರು: ವಂಚನೆ ಪ್ರಕರಣವೊಂದಲ್ಲಿ ವಶಕ್ಕೆ ಪಡೆದಿದ್ದ ಆರೋಪಿಯನ್ನು ಬಿಡುಗಡೆ ಮಾಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೆ.ಆರ್.ಪುರಂ ಠಾಣೆಯ ಇಬ್ಬರು ಪೊಲೀಸರು ಒಂದು ಲಕ್ಷ ರೂ.ನಗದು ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ.

ಪ್ರಕರಣದ ಕುರಿತು ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಗುರುವಾರ ಸಂಜೆ ಒಂದು ಲಕ್ಷ ರೂ. ಲಂಚದ ಹಣ ಪಡೆಯುತ್ತಿದ್ದ ವೇಳೆ ಕೆ.ಆರ್.ಪುರಂ ಠಾಣೆಯ ಇನ್‍ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್‍ಇನ್‍ಸ್ಪೆಕ್ಟರ್ ರಮ್ಯ ಎಂಬುವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಐದು ಲಕ್ಷ ರೂ. ಲಂಚ ಬೇಡಿಕೆ ಹಣದಲ್ಲಿ ಆರೋಪಿಗಳು ಈ ಮೊದಲೇ ಐವತ್ತು ಸಾವಿರ ರೂ. ಪಡೆದಿದ್ದರು ಎಂದು ಗೊತ್ತಾಗಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News