×
Ad

ಬೆಂಗಳೂರು| 8.40 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ: ಓರ್ವನ ಬಂಧನ

Update: 2024-01-02 18:40 IST

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಡ್ರಗ್ ಪೆಡ್ಲರ್ ಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಓರ್ವ ಡ್ರಗ್ ಪೆಡ್ಲರ್‍‌ನನ್ನು ಬಂಧಿಸಿ, 8.40 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ದೊಮ್ಮಲೂರಿನ ನಿವಾಸಿಯಾಗಿರುವ ಭರತ್ ಎಂಬಾತನನ್ನು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಬಿಎ ಪದವೀಧರನಾಗಿರುವ ಈ ಆರೋಪಿಯನ್ನು ಬಂಧಿಸಿ 25 ಗ್ರಾಂ ಎಂಡಿಎಂಎ ಕ್ರಿಸ್ಟಲ್, 30 ಎಕ್ಸ್ಟಸಿ ಮಾತ್ರೆಗಳು, 1.54 ಕೆಜಿ ಗಾಂಜಾ  ವಶಪಡಿಸಿಕೊಳ್ಳಲಾಗಿದೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಆರೋಪಿಯು ಡ್ರಗ್ ಪೆಡ್ಲಿಂಗ್ ಮಾಡಿ ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ನಿಷೇಧಿತ ಮಾದಕ ವಸ್ತುಗಳನ್ನು ಸ್ಥಳೀಯ ಡ್ರಗ್ ಪೆಡ್ಲರ್ ಗಳಿಂದ ಖರೀದಿಸಿ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದನು.

ಈತನ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News