×
Ad

ಬೆಂಗಳೂರು | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಇಬ್ಬರ ಬಂಧನ

Update: 2024-04-29 19:16 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಅಪ್ರಾಪ್ತೆಗೆ ಚಾಕೋಲೆಟ್, ಮಿಠಾಯಿ ಕೊಡಿಸುವ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಇಲ್ಲಿನ ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸಚಿನ್ ಮತ್ತು ಶೇಖರ್ ಎಂಬುವರನ್ನು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗಳ ವಿರುದ್ಧ ಎ.24ರಂದು ಕಾಡುಗೋಡಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಆರೋಪಿಗಳು ಕೂಡ ಸಮೀಪದಲ್ಲಿಯೇ ವಾಸವಿದ್ದರು. ಸಂತ್ರಸ್ತೆಯ ಪೋಷಕರು ಕೆಲಸದ ನಿಮಿತ್ತ ಮನೆಯಿಂದ ಹೊರಗಡೆ ಹೋಗಿದ್ದಾಗ, ಆರೋಪಿಗಳು ಆಕೆಗೆ ಚಾಕೋಲೆಟ್ ಮತ್ತು ಮಿಠಾಯಿ ಕೊಡಿಸುತ್ತೇನೆ ಎಂದು ಹೇಳಿ ಆಕೆಯನ್ನು ತಮ್ಮ ಮನೆಗೆ ಕರೆದೊಯ್ದಿದ್ದರು.

ಮನೆಯಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದನ್ನು ಗಮನಿಸಿದ ಸ್ಥಳೀಯರು ಸಂತ್ರಸ್ತೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಪೋಷಕರು ಸ್ಥಳೀಯರ ಜೊತೆ ಆರೋಪಿಗಳ ಮನೆಗೆ ನುಗ್ಗಿ ಬಾಲಕಿಯನ್ನು ರಕ್ಷಿಸಿ, ಆರೋಪಿಗಳಿಗೆ ಥಳಿಸಿ ಬಳಿಕ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು. ಇಬ್ಬರು ಆರೋಪಿಗಳ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಕ್ರಮ ಜರುಗಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News