×
Ad

ಬೆಂಗಳೂರು | ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ ಪ್ರಯಾಣಿಕನ ಸೆರೆ

Update: 2024-05-08 20:25 IST

ಬೆಂಗಳೂರು : ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ ಪ್ರಯಾಣಿಕನನ್ನು ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಮುಹಮ್ಮದ್ ಅಸ್ಲಾಂ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಸಿಗರೇಟ್ ಸೇದಿದ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಮುಹಮ್ಮದ್ ಅಸ್ಲಾಂನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News