×
Ad

ಬೆಂಗಳೂರು | ವಿದ್ಯುತ್ ತಂತಿ ಮೈಮೇಲೆ ಬಿದ್ದು ಮಹಿಳೆ ಮೃತ್ಯು

Update: 2024-10-07 21:27 IST

ಸಾಂದರ್ಭಿಕ ಚಿತ್ರ(Meta AI)

ಬೆಂಗಳೂರು : ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಇರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.

ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮನೆ ಬಳಿ ನಿಂತಿದ್ದ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಮಹಿಳೆಯ ಮೈಮೇಲೆ ಬಿದ್ದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ರವಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News