×
Ad

ಬೆಂಗಳೂರು | ಯುವಕನ ಮೇಲೆ ಆಸಿಡ್ ಮಿಶ್ರಿತ ಕೆಮಿಕಲ್ ಎರಚಿ ಆರೋಪಿ ಪರಾರಿ

Update: 2024-09-23 18:25 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಯುವಕನ ಮೇಲೆ ಅಪರಿಚಿತನೊಬ್ಬ ಆ್ಯಸಿಡ್ ಮಿಶ್ರಿತ ಕೆಮಿಕಲ್ ಎರಚಿ ಪರಾರಿಯಾಗಿರುವ ಘಟನೆ ಇಲ್ಲಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸಣ್ಣಕ್ಕಿ ಬಯಲಿನ ಬಾಲಾಜಿ ವೈನ್ಸ್ ಸ್ಟೋರ್ ಬಳಿ ವರದಿಯಾಗಿದೆ.

ಸೆ.22ರಂದು ಘಟನೆ ನಡೆದಿದ್ದು, ಆ್ಯಸಿಡ್ ದಾಳಿಯಿಂದ ನಾಗೇಶ್ ಕೊಂಡಾ(21) ಎಂಬಾತನ ಮುಖಕ್ಕೆ ತೀವ್ರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ವೃಷಭಾವತಿ ನಗರದಲ್ಲಿರುವ ಇಂಡಸ್ಟ್ರೀಸ್ ಕಂಪೆನಿಯೊಂದರಲ್ಲಿ ಫಿಟ್ಟರ್ ಆಗಿ ನಾಗೇಶ್ ಕೆಲಸ ಮಾಡುತ್ತಿದ್ದರು. ಸೆ.22ರ ರವಿವಾರ ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಮದ್ಯದಂಗಡಿಗೆ ಬಂದು ಮದ್ಯಪಾನ ಮಾಡಿ, ಊಟ ಮುಗಿಸಿ ಮನೆಗೆ ಹೊರಟಿದ್ದರು.

ಈ ವೇಳೆ ಮದ್ಯದಂಗಡಿ ಬಳಿ ಬಂದ ಅಪರಿಚಿತ ವ್ಯಕ್ತಿಯು ನಾಗೇಶ್ ಮುಖಕ್ಕೆ ಕೆಮಿಕಲ್ ಎರಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗಾಯಾಳುವಿನ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News