×
Ad

ಬೆಂಗಳೂರು | ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ಆರೋಪ : ಮೂವರ ಬಂಧನ

Update: 2024-02-25 20:42 IST

ಬೆಂಗಳೂರು : ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಯಲಹಂಕದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಪ್ರಕರಣದಲ್ಲಿ ಏಳು ಮಂದಿ ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದ್ದು, ಆಂಜನೇಯ ಗೌಡ, ಆಂಜನೇಯ ರೆಡ್ಡಿ ಹಾಗೂ ಹರೀಶ್ ಎಂಬುವರನ್ನು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಲಹಂಕ ಉಪನಗರದ ಬಿ ಸೆಕ್ಟರ್ ನಲ್ಲಿರುವ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಥಾಯ್ಲೆಂಡ್ ದೇಶದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ. ಟೂರಿಸ್ಟ್ ವೀಸಾ ಹಾಗೂ ಬಿಸ್ನೆಸ್ ವೀಸಾ ಮೂಲಕ ಆರೋಪಿಗಳು ಮಹಿಳೆಯರನ್ನು ಕರೆ ತಂದಿರುವುದು ತನಿಖೆಯಲ್ಲಿ ಬಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News