×
Ad

ಬೆಂಗಳೂರು | ಲಂಚಕ್ಕೆ ಬೇಡಿಕೆ ಆರೋಪ : ಇಬ್ಬರು ಪೊಲೀಸ್ ಸಿಬ್ಬಂದಿ ಲೋಕಾಯುಕ್ತ ವಶಕ್ಕೆ

Update: 2024-03-27 18:31 IST

ಬೆಂಗಳೂರು: ಗ್ಯಾಸ್ ಸಿಲಿಂಡರ್ ಗಳ ವಿತರಣೆಗೆ ಅನುಮತಿ ಕೊಡಿಸಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪೀಣ್ಯ ಉಪವಿಭಾಗದ ಎಸಿಪಿಯವರ ವಾಹನ ಚಾಲಕ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್‍ಸ್ಟೇಬಲ್ ಗಂಗಹನುಮಯ್ಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಸುಂಕದಕಟ್ಟೆ ನಿವಾಸಿಯಾಗಿರುವ ಚೇತನ್ ಎಂಬುವವರು ಪೀಣ್ಯ ಉಪವಿಭಾಗದಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆಗೆ ಅನುಮತಿ ಕೋರಿದ್ದರು. ಅನುಮತಿ ದೊರಕಿಸಿ ಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳ ವಿರುದ್ಧ ಲೋಕಾಯುಕ್ತಕ್ಕೆ ಚೇತನ್ ದೂರು ನೀಡಿದ್ದರು ಎನ್ನಲಾಗಿದೆ.

ಅದರನ್ವಯ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದರು. ಮಾ.27ರಂದು ಪೀಣ್ಯ ಉಪವಿಭಾಗದ ಎಸಿಪಿಯವರ ಕಚೇರಿ ಬಳಿ 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಇಬ್ಬರು ಆರೋಪಿಗಳ ವಿಚಾರಣೆ ಮುಂದುವರೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News