×
Ad

ಬೆಂಗಳೂರು | ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2025-04-09 13:20 IST

ಬೆಂಗಳೂರು : ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಕನಕಧಾಮ ಹೊಸದುರ್ಗ ಬೆಂಗಳೂರು ವಿಭಾಗ ಶ್ರೀಮಠದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಕುರುಬ ಸಮಾಜದ ವಿಧ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

2024-25 ರ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ ಮತ್ತು ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕಗಳಿಸಿದ ಕುರುಬ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಾವು ಪಡೆದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ ಜೆರಾಕ್ಸನ್ನು ಅಂಚೆ ಮೂಲಕ ಸಲ್ಲಿಸಬೇಕು. ವಿದ್ಯಾರ್ಥಿಗಳು ಪೂರ್ಣ ವಿಳಾಸದೊಂದಿಗೆ ಕಡ್ಡಾಯವಾಗಿ ಪಿನ್ ಕೋಡ್ ಮತ್ತು ವಿದ್ಯಾರ್ಥಿ ಮತ್ತು ಪೋಷಕರ ಪೋನ್ ನಂಬರ್ ನಮೂದಿಸಬೇಕು.

ಅರ್ಜಿ ಸಲ್ಲಿಸಲು ಜುಲೈ 10 ರಂದು ಕೊನೆಯ ದಿವಾಗಿದ್ದು, ಸೂಕ್ತ ದಾಖಲೆಗಳೊಂದಿಗೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಬೆಂಗಳೂರು ಕನಕ ಭವನ 10 ನೇ ಅಡ್ಡರಸ್ತೆ ಚಂದ್ರಾಲೇಔಟ್ 1 ನೇ ಹಂತ ಬೆಂಗಳೂರು 560072 ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕೇಶವಮೂರ್ತಿ 9036597972, ವೇದಮೂರ್ತಿ ಒಡೆಯರ್ 7349069190 ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News