×
Ad

ಬೆಂಗಳೂರು | ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ಆರೋಪಿಯ ಬಂಧನ

Update: 2024-04-18 19:16 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಅಂತರ್ಜಾಲದಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಹಾಗೂ ಭಾವಚಿತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ಸ್ನೇಹಿತರಿಗೆ ಹಾಗೂ ವಾಟ್ಸಾಪ್ ಗ್ರೂಪ್‍ಗಳಲ್ಲಿ ಶೇರ್ ಮಾಡುತ್ತಿದ್ದ ಆರೋಪಿಯನ್ನು ನಗರ ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಕ್ಕಳ ಅಶ್ಲೀಲ ವಿಡಿಯೋಗಳು ಹಾಗೂ ಭಾವಚಿತ್ರಗಳನ್ನು ವೀಕ್ಷಿಸಿ, ಬಳಿಕ ಡೌನ್‍ಲೋಡ್ ಮಾಡಿಕೊಂಡು ಇತರರಿಗೆ ಶೇರ್ ಮಾಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ನೂರ್ ಇಸ್ಲಾಂ ಚೌದ್ರಿ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಖಾಸಗಿ ಕಂಪೆನಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪೋರ್ನೋಗ್ರಪಿಗೆ ಸಂಬಂಧಿಸಿದ ವೆಬ್‍ಸೈಟ್‍ನಿಂದ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್‍ಲೋಡ್ ಮಾಡಿಕೊಂಡು ತನ್ನ ಸ್ನೇಹಿತರು ಹಾಗೂ ವಾಟ್ಸಾಪ್ ಗ್ರೂಪ್‍ಗಳಲ್ಲಿ ಶೇರ್ ಮಾಡಿ ವಿಕೃತ ಆನಂದ ಪಡುತ್ತಿದ್ದ. ಈ ಬಗ್ಗೆ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News