×
Ad

ಬೆಂಗಳೂರು| ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ: ಯುವತಿಗೆ ನ್ಯಾಯಾಂಗ ಬಂಧನ

Update: 2024-01-16 20:13 IST

ಬಿಎಂಟಿಸಿ ಬಸ್‌ - ಸಾಂದರ್ಭಿಕ ಚಿತ್ರ

ಬೆಂಗಳೂರು: ಉಚಿತ ಟಿಕೆಟ್ ಪಡೆಯಲು ಗುರುತಿನ ಚೀಟಿ ತೋರಿಸುವ ವಿಚಾರವಾಗಿ ನಡೆದ ಜಗಳದ ವೇಳೆ ಬಿಎಂಟಿಸಿ ಬಸ್‍ನ ಮಹಿಳಾ ನಿರ್ವಾಹಕಿಯ ಮೇಲೆ ಹಲ್ಲೆ ಮಾಡಿ ಉಗುರುಗಳಿಂದ ಮುಖ ಪರಚಿ ಗಾಯಗೊಳಿಸಿದ್ದ ಯುವತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಿಕ್ಕಬಾಣವಾರ ನಿವಾಸಿ ಮೋನಿಷಾ(29) ಜೈಲು ಸೇರಿದವರು. ಬಿಎಂಟಿಸಿ ಘಟಕ 40ರ ಬಸ್ ನಿರ್ವಾಹಕಿ ಸುಕನ್ಯಾ(49) ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ ಗಾಯಗೊಳಿಸಿದ್ದರು. ಈ ಸಂಬಂಧ ಸುಕನ್ಯಾ ಅವರು ನೀಡಿದ ದೂರಿನ ಮೇರೆಗೆ ಬಾಗಲಗುಂಟೆ ಠಾಣೆ ಪೊಲೀಸರು ಆರೋಪಿ ಮೋನಿಷಾಳನ್ನು ಬಂಧಿಸಿದ್ದರು.

ಸಂಕ್ರಾಂತಿ ಹಬ್ಬದ ರಜೆ ಹಿನ್ನೆಲೆಯಲ್ಲಿ 31ನೆ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಆಕೆಯನ್ನು ಹಾಜರುಪಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News