×
Ad

ಬೆಂಗಳೂರು‌ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಪುತ್ರನ ಬೈಕ್ ಅಪಘಾತ

Update: 2024-04-11 21:34 IST

ಬೆಂಗಳೂರು: ಇಲ್ಲಿನ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೊರವರ್ತುಲ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಶಾಸಕ ವಿನಯ್ ಕುಲಕರ್ಣಿ ಅವರ ಮಗ ಹೇಮಂತ್(19) ಗಾಯಗೊಂಡಿದ್ದಾರೆಂದು ವರದಿಯಾಗಿದೆ.

ಗುರುವಾರ ಬೆಳಗ್ಗೆ 5ಗಂಟೆ ಸುಮಾರಿಗೆ ಹೇಮಂತ್ ಬೈಕ್‍ನಲ್ಲಿ ಹೊರಟಿದ್ದಾಗ ಮಾರ್ಗ ಮಧ್ಯದಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಮೇತ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಹೇಮಂತ್ ಗಾಯಗೊಂಡಿದ್ದಾರೆ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

ಹೇಮಂತ್ ಕಾಲಿಗೆ ಪಟ್ಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News