×
Ad

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ; ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ

Update: 2024-05-30 13:58 IST

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ʼಸಚಿವರಿಗೆ ಧಿಕ್ಕಾರ’, ‘ಸರಕಾರಕ್ಕೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಲಾಯಿತು. ಪೊಲೀಸರು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಅಕ್ರಮವಾಗಿ ಅಮಾಯಕರಾದ ತಮ್ಮನ್ನು ಬಂಧಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

ವಾಲ್ಮೀಕಿ ನಿಗಮದಲ್ಲಿ ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಡೆತ್ ನೋಟಿನಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಈ ಸಂದರ್ಭದಲ್ಲಿ ಕಾರ್ಯಕರ್ತರು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News