×
Ad

ಬೆಂಗಳೂರು | ಎಂ.ಜಿ. ರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್: ಪ್ರಯಾಣಿಕರು ಪಾರು

Update: 2024-07-09 11:00 IST

ಬೆಂಗಳೂರು, ಜು.9: ನಗರದಲ್ಲಿ ಬಿಎಂಟಿಸಿ ಬಸ್ಸೊಂದು ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ನಗರದ ಎಂ.ಜಿ. ರೋಡ್ ನಲ್ಲಿ ನಡೆದಿದೆ. ಘಟನೆ ವೇಳೆ ಬಸ್ಸಿನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಬಿಎಂಟಿಸಿ ಬಸ್ ರೋಸ್ ಗಾರ್ಡನ್ ನಿಂದ ಶಿವಾಜಿ ನಗರಕ್ಕೆ ಬರುತ್ತಿತ್ತು. ದಾರಿ ಮಧ್ಯೆ ಎಂ.ಜಿ. ರೋಡ್ ನ ಅನಿಲ್ ಕುಂಬ್ಳೆ ಸಿಗ್ನಲ್ನಲ್ಲಿ ಚಾಲಕ ಬಸ್ ನಿಲ್ಲಿಸಿದ್ದರು. ಮತ್ತೆ ಬಸ್ ಸ್ಟಾರ್ಟ್ ಮಾಡಲು ಯತ್ನಿಸಿದಾಗ ಸ್ಟಾರ್ಟ್ ಆಗಲೇ ಇಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯು ಬಸ್ ಆವರಿಸಿಯಾಗಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News