×
Ad

ಬೆಂಗಳೂರು| ನೈಸ್ ರಸ್ತೆಯಲ್ಲಿ ಲಾರಿಗೆ ಕಾರು ಢಿಕ್ಕಿ: ಇಬ್ಬರು ಮೃತ್ಯು

Update: 2023-12-26 18:32 IST

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ನೈಸ್ ರಸ್ತೆಯಲ್ಲಿ ಲಾರಿಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ.

ಚುಂಚಘಟ್ಟ ನಿವಾಸಿ ಮಂಜುನಾಥ್(52) ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಮಂಜುನಾಥ್ ಪತ್ನಿ ಹೇಮಲತಾ, ಮಗಳು ಕೃತಿಕಾ(20), ಮಗ ಪ್ರಜ್ವಲ್(14) ಎಂಬುವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಬಳಿಕ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿರುವುದಾಗಿ ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News