×
Ad

ಬೆಂಗಳೂರು| ಬೈಕ್ ನಡುವೆ ಢಿಕ್ಕಿ: ತಂದೆ, ಮಗಳು ಮೃತ್ಯು

Update: 2024-01-16 17:50 IST

ಬೆಂಗಳೂರು: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡಕಮಾರನಹಳ್ಳಿ ಬಳಿ ಜರುಗಿದೆ.

ತಂದೆ ಅಮಿತ್( 32), ಮಗಳು ಅನ್ವಿತಾ(5) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಕುಸುಮಾ ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮೃತ ಅಮಿತ್ ಗ್ರಾಫಿಕ್ಸ್ ಡಿಸೈನರ್ ಆಗಿದ್ದು ಚಿಕ್ಕಪೇಟೆಯಲ್ಲಿ ಕೆಲಸ ಮಾಡುತ್ತಿದ್ದರು. ಸಂಕ್ರಾಂತಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಹೋಗಿದ್ದರು, ಮಂಗಳವಾರ ಬೆಳಗ್ಗೆ ವಾಪಸ್ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್ಪಿ ಪುರುಷೋತ್ತಮ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News