ಬೆಂಗಳೂರು | ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ ; ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಪರಿಹಾರ
Update: 2024-02-20 21:09 IST
ಬೆಂಗಳೂರು: ಯಶವಂತಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಗಂಧದ್ರವ್ಯ ಕಾರ್ಖಾನೆಯಲ್ಲಿ ಸ್ಫೋಟದಿಂದ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5ಲಕ್ಷ ರೂ. ಹಾಗೂ ಐದು ಜನ ಗಾಯಾಳುಗಳಿಗೆ ತಲಾ 1 ಲಕ್ಷ ರೂ.ಗಳ ಪರಿಹಾರವನ್ನು ಸರಕಾರದ ವತಿಯಿಂದ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳವಾರ ವಿಧಾನಸಭೆಯಲ್ಲಿ ಪ್ರಕಟಿಸಿದರು.