×
Ad

ಬೆಂಗಳೂರು | ಸೈನಿಕ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ : ಪ್ರಕರಣ ದಾಖಲು

Update: 2024-09-18 20:51 IST

ಸಾಂದರ್ಭಿಕ ಚಿತ್ರ(PTI)

ಬೆಂಗಳೂರು : ಸೈನಿಕ ಶಾಲೆಯೊಂದಕ್ಕೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಸಂದೇಶವೊಂದು ಬಂದಿದ್ದು, ಈ ಸಂಬಂಧ ಇಲ್ಲಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.

ಸೆ.18ರಂದು ಅಶೋಕನಗರದ ಸೈನಿಕ ಶಾಲೆಯ ಇಮೇಲ್ ಖಾತೆಗೆ ಅನಾಮಧೇಯ ವ್ಯಕ್ತಿಗಳಿಂದ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಕರೆ ಬಂದಿದ್ದು, ಶಾಲಾ ಆಡಳಿತ ಮಂಡಳಿಯ ಮಾಹಿತಿ ಮೇರೆಗೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳ ಶ್ವಾನ ದಳ ಸಮೇತ ಶಾಲೆಯಲ್ಲಿ ಪರಿಶೀಲನೆ ನಡೆಸಿ ಇದೊಂದು ಹುಸಿ ಬಾಂಬ್ ಕರೆ ಎಂದು ಖಚಿತಪಡಿಸಿದೆ.

ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News