×
Ad

ಬೆಂಗಳೂರು | ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ : ಆರೋಪಿ ಸೆರೆ

Update: 2024-06-20 19:05 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ನಗರದ ಶೆಟ್ಟಿಹಳ್ಳಿಯ ಮನೆಯೊಂದರಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಆರೋಪಿ ಪತಿಯನ್ನು ಇಲ್ಲಿನ ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಲತಾ(30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಆಕೆಯ ಗಂಡ ಕಾಂತರಾಜು(33) ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಲತಾ ನೇಣಿಗೆ ಶರಣಾಗುವ ಮುನ್ನ ಬರೆದಿರುವ ಡೆತ್‍ನೋಟ್‍ನಲ್ಲಿ ಗಂಡ ಕಾಂತರಾಜ್ ಸೇರಿ 8 ಜನರ ವಿರುದ್ಧ ಆರೋಪಿಸಿದ್ದು, ‘ಕಾಂತರಾಜ್, ದಿವ್ಯಾ ಎಂಬುವವರ ಜತೆ ಅಕ್ರಮ ಸಂಬಂಧ ಹೊಂದಿದ್ದ. ಇದರಿಂದ ನನಗೆ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆತನ ಅನೈತಿಕ ಸಂಬಂಧಕ್ಕೆ ಬೇಸತ್ತು ನಾನು ಆತ್ಮಹತ್ಯೆಗೆ ಶರಣಾಗಿದ್ದೇನೆ’ ಎಂಬುದಾಗಿ ಬರೆದಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ಕಾಂತರಾಜ್‍ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರು ಉಳಿದ ಆರೋಪಿಗಳಿಗೆ ಶೋಧ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News