×
Ad

ಬೆಂಗಳೂರು | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Update: 2024-10-14 13:29 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಪತಿ, ಪತ್ನಿ ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ಸೋಮವಾರ ವರದಿಯಾಗಿದೆ.

ಪತಿ ಅವಿನಾಶ್(33), ಪತ್ನಿ ಮಮತಾ(30), ಮಕ್ಕಳಾದ ಆಧೀಯ(5) ಮತ್ತು ಅನಯಾ(3) ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.

ಮೃತರು ಕಲಬುರಗಿ ಮೂಲದವರಾಗಿದ್ದು, 6 ವರ್ಷಗಳ ಹಿಂದೆ ಯಲಹಂಕದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಅವಿನಾಶ್ ಕ್ಯಾಬ್ ಡ್ರೈವರ್ ಕೆಲಸ ಮಾಡುತ್ತಿದ್ದು, ಪತ್ನಿ ಮಮತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು ಎಂದು ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ಪ್ರಕರಣಗಳನ್ನು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News