ಬೆಂಗಳೂರು | ವಂಚನೆ ಪ್ರಕರಣ: ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಈ.ಡಿ. ದಾಳಿ
Update: 2024-06-24 18:10 IST
ED | PTI
ಬೆಂಗಳೂರು : ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಪ್ರಕರಣಗಳಡಿ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ(ಈ.ಡಿ.) ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಬೆಂಗಳೂರಿನ ಯುಬಿ ಸಿಟಿಯ ಕಿಂಗ್‍ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರಿದಂತೆ 11 ಸ್ಥಳಗಳಲ್ಲಿ ಈ.ಡಿ. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಬಿಲ್ಡರ್ ಗಳು ಮತ್ತು ಕೆಲ ಕಂಪೆನಿಗಳ ವಿರುದ್ಧ ಅನೇಕ ಅವ್ಯವಹಾರಗಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.