×
Ad

ಬೆಂಗಳೂರು | 6.90 ಕೋಟಿ ರೂ. ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು

Update: 2025-08-02 20:31 IST

ಸಾಂದರ್ಭಿಕ ಚಿತ್ರ | PC : Meta AI

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 6.90 ಕೋಟಿ ರೂ. ಅಂದಾಜು ಮೌಲ್ಯದ ಒಟ್ಟು 3 ಎಕರೆ 0.05 ಗುಂಟೆ ಸರಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರಕಾರದ ವಶಕ್ಕೆ ಪಡೆಯಲಾಯಿತು.

ಶನಿವಾರ ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್‍ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರಕಾರಿ ತೋಪು, ಖರಾಬು ಕಲ್ಲುಬೆಟ್ಟ, ಸರಕಾರಿ ಕೆರೆ, ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಆನೇಕಲ್ ತಾಲೂಕಿನ ಕಸಬಾ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂ. 11ರ ಸರಕಾರಿ ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.23 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 25 ಲಕ್ಷ ರೂ., ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಗೊಲ್ಲರಪಾಳ್ಯ ಗ್ರಾಮದ ಸರ್ವೆ ನಂ 28ರ ಖರಾಬು ಕಲ್ಲುಬೆಟ್ಟ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 50 ಲಕ್ಷ ರೂ. ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸರ್ವೆ ನಂ 44ರ ಸರಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 6.15 ಕೋಟಿ ರೂ.ಗಳಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News