ಬೆಂಗಳೂರು | ಪ್ರೆಸ್ಟೀಜ್ ಗ್ರೂಪ್ ಮೇಲೆ ಐಟಿ ದಾಳಿ
Update: 2025-02-25 21:55 IST
ಬೆಂಗಳೂರು : ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿರುವ ಪ್ರೆಸ್ಟೀಜ್ ಗ್ರೂಪ್ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಬೆಳ್ಳಂಬೆಳಗ್ಗೆ ನಗರದ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಪ್ರೆಸ್ಟೀಜ್ ಗ್ರೂಪ್‍ನಿಂದ ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.