×
Ad

ಬೆಂಗಳೂರು | ರಸ್ತೆ ವಿಭಜಕಕ್ಕೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ : ಆರು ಮಂದಿಗೆ ಗಾಯ

Update: 2024-05-18 20:38 IST

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್‍ವೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಶನಿವಾರ ವರದಿಯಾಗಿದೆ.

ಬೆಂಗಳೂರು-ಸೋಮವಾರಪೇಟೆ ಮಾರ್ಗದ ಬಸ್ ಅಪಘಾತಕ್ಕೀಡಾಗಿದ್ದು, ಡಿವೈಡರ್ ಗೆ ಬಸ್ ಢಿಕ್ಕಿ ಹೊಡೆದು ನಿಂತಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನೆ ಬಳಿಕ ಸ್ಥಳಕ್ಕೆ ಬಂದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಕ್ರೇನ್ ಸಹಾಯದಿಂದ ಬಸ್ ತೆರವುಗೊಳಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News