×
Ad

ಬೆಂಗಳೂರು| ಮೆಟ್ರೋದಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ: ಆರೋಪಿ ಬಂಧನ

Update: 2023-12-29 21:46 IST

ಚಿತ್ರ: twitter@IndexKarnataka

ಬೆಂಗಳೂರು:  ಮೆಟ್ರೋದಲ್ಲಿ ಕುಡಿದ ಮತ್ತಿನಲ್ಲಿ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಇಲ್ಲಿನ ಉಪ್ಪಾರಪೇಟೆ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಕಾಮಾಕ್ಷಿಪಾಳ್ಯ ನಿವಾಸಿ ಮನೋಜ್ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಎಂದು ಗುರುತಿಸಲಾಗಿದೆ. ಯುವತಿ ನೀಡಿದ ದೂರಿನನ್ವಯ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ.

ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಯು ವೈಟ್‍ಫೀಲ್ಡ್ ಗೆ ಹೋಗಲು ನ್ಯಾಷನಲ್ ಕಾಲೇಜು ಬಳಿ ಮೆಟ್ರೋ ಹತ್ತಿದ್ದಾಳೆ. ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಬೋಗಿಯಲ್ಲಿ ಕುಳಿತಿದ್ದ ವ್ಯಕ್ತಿಯು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಯುವತಿ ಇಳಿಯುತ್ತಿದ್ದಂತೆ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ ಎನ್ನಲಾಗಿದೆ.

ಹಿಂದಿನಿಂದ ಯುವತಿಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ನಂತರ ಆಕೆಯನ್ನೇ ನೋಡುತ್ತಾ ನಿಂತಿದ್ದ ಎನ್ನಲಾಗಿದೆ. ಬಳಿಕ ಅಲ್ಲಿಂದ ಹೋಗಿದ್ದಾನೆ. ಇದರಿಂದ ಭಯಗೊಂಡಿದ್ದ ಯುವತಿಯು ಮೆಟ್ರೋದಿಂದ ಇಳಿದು ಸೆಕ್ಯೂರಿಟಿ ಸಿಬ್ಬಂದಿಗೆ ವಿಚಾರವನ್ನು ತಿಳಿಸಿದ್ದಾಳೆ. ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಆರೋಪಿ ಮನೋಜ್‍ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News