×
Ad

ಬೆಂಗಳೂರು | ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ತಾಯಿ ಆತ್ಮಹತ್ಯೆ

Update: 2024-12-12 18:15 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಕುಸುಮಾ (35) ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ ಆಗಿದ್ದು, ಮಗ ಶ್ರೇಯಾನ್ (6) ಹಾಗೂ ಮಗಳು ಚಾರ್ವಿ (1) ಅನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

2015ರಲ್ಲಿ ವಿವಾಹವಾಗಿದ್ದ ಸುರೇಶ್ ಹಾಗೂ ಕುಸುಮಾ ದಂಪತಿ ಕೊಡಿಗೇಹಳ್ಳಿಯ ಬಾಲಾಜಿ ಲೇಔಟ್‍ನಲ್ಲಿ ಅಪಾರ್ಟ್‍ಮೆಂಟ್‍ವೊಂದರಲ್ಲಿ ಮಕ್ಕಳೊಂದಿಗೆ ವಾಸವಿದ್ದರು. ಸುರೇಶ್ ಖಾಸಗಿ ಕಂಪೆನಿಯೊಂದರ ಉದ್ಯೋಗಿಯಾಗಿದ್ದರು. ತಡರಾತ್ರಿ ಮನೆಯಲ್ಲಿದ್ದ ಕುಸುಮಾ "ನಮ್ಮ ಸಾವಿಗೆ ನಾವೇ ಕಾರಣ" ಎಂದು ಡೆತ್ ನೋಟ್ ಬರೆದಿಟ್ಟು, ಮಕ್ಕಳನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳದಲ್ಲಿ ಡೆತ್‍ನೋಟ್ ಸಹ ಸಿಕ್ಕಿದ್ದು, ಎಫ್‍ಎಸ್‍ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ.ಇನ್ನೂ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News