×
Ad

ಬೆಂಗಳೂರು | ಅಸ್ಸಾಂನ ಮೂಲದ ಯುವತಿಯ ಹತ್ಯೆ ಪ್ರಕರಣ : ಆರೋಪಿ ಬಂಧನ

Update: 2024-11-29 20:27 IST

 ಮಾಯಾ ಗೊಗೋಯ್

ಬೆಂಗಳೂರು : ಅಸ್ಸಾಂನ ಗುವಾಹಟಿ ಮೂಲದ ಯುವತಿಯೊಬ್ಬಳನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪದಡಿ ಓರ್ವನನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಮಾಯಾ ಗೊಗೋಯ್ (19) ಎಂಬಾಕೆಯನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ಆರೋಪದಡಿ ಆರವ್ ಹನೋಯ್ ಎಂಬಾತನನ್ನು ನೆರೆಯ ರಾಜ್ಯವೊಂದರಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

ನ.26ರಂದು ಇಂದಿರಾನಗರ 2ನೆ ಹಂತದಲ್ಲಿರುವ ದಿ ರಾಯಲ್ ಲಿವಿಂಗ್ ಅಪಾರ್ಟ್‍ಮೆಂಟ್‍ನಲ್ಲಿ ಮಾಯಾ ಗೊಗೋಯ್ ಎಂಬಾಕೆಯನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದ ಇಂದಿರಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News